Gruhalakshmi Scheme Amount Credit: ಗೃಹಲಕ್ಷ್ಮಿ ಯೋಜನೆ ಹಣ ಜಮಾ! ಈಗಲೇ ಖಾತೆಯನ್ನು ಚೆಕ್ ಮಾಡಿಕೊಳ್ಳಿ?

Gruhalakshmi Scheme Amount Credit: ಗೃಹಲಕ್ಷ್ಮಿ ಯೋಜನೆ ಹಣ ಜಮಾ! ಈಗಲೇ ಖಾತೆಯನ್ನು ಚೆಕ್ ಮಾಡಿಕೊಳ್ಳಿ?

ಈಗ ನಮ್ಮ ರಾಜ್ಯದಲ್ಲಿ ಆಡಳಿತ ಮಾಡುತ್ತಿರುವ ಕಾಂಗ್ರೆಸ್ ಸರ್ಕಾರವು ನೀಡಿರುವ ಐದು ಗ್ಯಾರಂಟಿ ಯೋಜನೆಗಳಲ್ಲಿ ಅತ್ಯಂತ ಜನಪ್ರಿಯವಾದ ಯೋಜನೆ ಅಂದರೆ ಅದು ಗೃಹಲಕ್ಷ್ಮಿ ಯೋಜನೆ. ಈಗ ಈ ಒಂದು ಯೋಜನೆ ಮೂಲಕ ಈಗ ಪ್ರತಿ ತಿಂಗಳು ನೀವು 2000 ಹಣವನ್ನು DBT ಮೂಲಕ ನೇರವಾಗಿ ನಿಮ್ಮ ಖಾತೆಗೆ ಸರಕಾರ ಹಣವನ್ನು ಜಮಾ ಮಾಡುತ್ತಾ ಬಂದಿದೆ.

Gruhalakshmi Scheme Amount Credit

ಅದೇ ರೀತಿಯಾಗಿ ಕಳೆದ ಕೆಲವೊಂದು ತಾಂತ್ರಿಕ ದೋಷಗಳಿಂದಾಗಿ ಈಗ ಕೆಲವು ಆಡಳಿತಾತ್ಮಕ ಕಾರಣಗಳಿಂದಾಗಿ ಈಗ ಕಂತುಗಳು ಜಮಾ ಆಗುವ ಪ್ರಕ್ರಿಯೆ ಈಗ ವಿಳಂಬವಾಗಿದೆ. ಈಗ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವ ಆದಂತ ಲಕ್ಷ್ಮಿ ಹೆಬ್ಬಾಳ್ಕರ್ ಅವರು ನೀಡಿರುವ ಮಾಹಿತಿ ಪ್ರಕಾರ ನವೆಂಬರ್ 28ರಂದು ಈ ಒಂದು ಗೃಹಲಕ್ಷ್ಮಿ ಯೋಜನೆ ಹಣವನ್ನು ಪ್ರತಿಯೊಬ್ಬರ ಖಾತೆಗಳಿಗೆ ಜಮಾ ಮಾಡಲಾಗಿದೆ ಎಂಬ ಮಾಹಿತಿ ನೀಡಿದ್ದಾರೆ.

ಅದೇ ರೀತಿಯಾಗಿ ಈಗಾಗಲೇ ಈ ಒಂದು ಯೋಜನೆ 2025 26ರ ಬಜೆಟ್ ನಲ್ಲಿ ಸುಮಾರು 29 ಸಾವಿರ ಕೋಟಿ ರೂಪಾಯಿಗಳನ್ನು ನಿಗದಿ ಮಾಡಲಾಗಿದ್ದು. ಈಗಾಗಲೇ ಇದುವರೆಗೂ 22 ಕಂತಿನ ಹಣಗಳು ಅಂದರೆ 44,000 ಹಣವನ್ನು ಪ್ರತಿಯೊಬ್ಬ ಮಹಿಳೆಯರ ಖಾತೆಗಳಿಗೆ ಜಮಾ ಮಾಡಲಾಗಿದೆ. ಈಗ ನೀವು ಕೂಡ ನಿಮ್ಮ ಖಾತೆಗೆ ಈ ಒಂದು ಗೃಹಲಕ್ಷ್ಮಿ ಹಣ ಜಮಾ ಆಗಿದೆ ಇಲ್ಲವೇ ಎಂಬುವುದರ ಬಗ್ಗೆ ಮಾಹಿತಿ ಪಡೆಯಲು ಈ ಒಂದು ಲೇಖನವನ್ನು ನೀವು ಸಂಪೂರ್ಣವಾಗಿ ಓದಿಕೊಳ್ಳಿ.

ಗೃಹಲಕ್ಷ್ಮಿ ಯೋಜನೆಯ ಮಾಹಿತಿ

ಈಗ ಈ ಒಂದು ಗೃಹಲಕ್ಷ್ಮಿ ಯೋಜನೆ ನಮ್ಮ ರಾಜ್ಯದಲ್ಲಿ ಆಡಳಿತ ಮಾಡುತ್ತಿರುವ ಸರ್ಕಾರ ನೀಡಿರುವ ಐದು ಗ್ಯಾರಂಟಿಗಳಲ್ಲಿ ಒಂದಾಗಿದೆ. ಈ ಒಂದು ಯೋಜನೆ ಮೂಲಕ ಪ್ರತಿ ಮಹಿಳೆಯರಿಗೂ ಕೂಡ ಈಗ ಪ್ರತಿ ತಿಂಗಳು 2000 ಹಣವನ್ನು ನೇರವಾಗಿ ಅವರ ಖಾತೆಗಳಿಗೆ ಜಮಾ ಮಾಡುವ ಉದ್ದೇಶವನ್ನು ಹೊಂದಿದೆ.

ಅದೇ ರೀತಿಯಾಗಿ ಈ ಒಂದು ಹಣವನ್ನು ಮಹಿಳೆಯರು ತಮ್ಮ ಮಕ್ಕಳ ಶಿಕ್ಷಣ, ಆರೋಗ್ಯದ ಸಮಯದಲ್ಲಿ ಸಹಾಯವನ್ನು ಪಡೆದುಕೊಳ್ಳಬಹುದಾಗಿದೆ. ಅದೇ ರೀತಿಯಾಗಿ ಈಗಾಗಲೇ ಹಿಂದೆ ಕೆಲವು ಒಂದಷ್ಟು ಪೆಂಡಿಂಗ್ ಇರುವಂತಹ ಹಣವನ್ನು ಕೂಡ ಇನ್ನೂ ಬಿಡುಗಡೆ ಆಗದ ಕಾರಣ ಪ್ರತಿಯೊಬ್ಬ ಮಹಿಳೆಯರು ಈಗ ಸರ್ಕಾರದ ವಿರುದ್ಧ ಆಕ್ರೋಶವನ್ನು ವ್ಯಕ್ತಪಡಿಸುತ್ತಾ ಇದ್ದಾರೆ.

ಬಾಕಿ ಕಂತಿನ ಮಾಹಿತಿ

ಈಗ ಸಚಿವರು ನೀಡಿರುವ ಮಾಹಿತಿಯ ಪ್ರಕಾರ ಸೆಪ್ಟೆಂಬರ್ ತಿಂಗಳ 23ನೇ ಕಂತಿನ ಹಣವನ್ನು ಮೊದಲು ಬಿಡುಗಡೆ ಮಾಡಲಾಗಿದ್ದು. ಆನಂತರ ಅಕ್ಟೋಬರ್ ತಿಂಗಳ ಹಣವನ್ನು ಡಿಸೆಂಬರ್ ಅಂತ್ಯದೊಳಗಾಗಿ ಪ್ರತಿಯೊಬ್ಬ ಮಹಿಳೆಯರ ಖಾತೆಗಳಿಗೆ ಜಮಾ ಮಾಡಲಾಗುತ್ತದೆ ಎಂಬ ಮಾಹಿತಿಯನ್ನು ನೀಡಿದ್ದಾರೆ. ಈಗಾಗಲೇ 23ನೇ ಕಂತಿನ ಹಣವನ್ನು ನವೆಂಬರ್ 28ರಂದು ಬಿಡುಗಡೆ ಮಾಡಲು ಪ್ರಾರಂಭ ಮಾಡಿದ್ದು. ಆಗಸ್ಟ್ ತಿಂಗಳ ಹಣವನ್ನು ಕೂಡ ಈಗ ಬಿಡುಗಡೆ ಮಾಡುವ ಸಾಧ್ಯತೆ ಇದೆ ಎಂದು ಸಚಿವರು ಮಾಹಿತಿಯನ್ನು ನೀಡಿದ್ದಾರೆ.

ಚೆಕ್ ಮಾಡಿಕೊಳ್ಳುವುದು ಹೇಗೆ?

ಈಗ ನೀವು ಕೂಡ ನಿಮ್ಮ ಖಾತೆಗೆ ಈ ಒಂದು ಗೃಹಲಕ್ಷ್ಮಿ ಯೋಜನೆಯ ಹಣ ಜಮಾ ಆಗಿದೆ ಇಲ್ಲವೇ ಎಂಬುವುದರ ಬಗ್ಗೆ ಮಾಹಿತಿಯನ್ನು ಪಡೆದುಕೊಳ್ಳಬೇಕೆಂದುಕೊಂಡಿದ್ದರೆ ಈಗ ನೀವು ಮೊದಲಿಗೆ ಕರ್ನಾಟಕ DBT ಎಂಬ ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿಕೊಂಡು ಅದರಲ್ಲಿ ಕೇಳುವಂತ ಪ್ರತಿಯೊಂದು ದಾಖಲೆಗಳನ್ನು ಸರಿಯಾದ ರೀತಿಯಲ್ಲಿ ಭರ್ತಿ ಮಾಡುವ ಮೂಲಕ ಈಗ ನಿಮ್ಮ ಖಾತೆಯೂ ಕೂಡ ಈ ಒಂದು ಗೃಹಲಕ್ಷ್ಮಿ ಯೋಜನ ಹಣವು ಜಮಾ ಆಗಿದೆ ಇಲ್ಲವೇ ಎಂಬುವುದರ ಬಗ್ಗೆ ಸಂಪೂರ್ಣವಾದ ಮಾಹಿತಿಯನ್ನು ಪಡೆದುಕೊಳ್ಳಬಹುದು.

Leave a Comment